Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:17 - ಪರಿಶುದ್ದ ಬೈಬಲ್‌

17 ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು ಖಡ್ಗಹತರ ಜೊತೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:17
12 ತಿಳಿವುಗಳ ಹೋಲಿಕೆ  

ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನ್ನು ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನ್ನು ಈದವು. ಆ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.


ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.


ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.


ಆದರೆ ನೀವು ಈ ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರುಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು ಕಾಯುತ್ತಿದ್ದಾರೆ.


ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನ್ನೆಲ್ಲಾ ಬೆಟ್ಟ, ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದ್ದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ಅಲ್ಲಿಂದ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು