ಯೆಹೆಜ್ಕೇಲನು 31:2 - ಪರಿಶುದ್ದ ಬೈಬಲ್2 “ನರಪುತ್ರನೇ, ಇದನ್ನು ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “‘ನೀನು ಅತ್ಯಂತ ಪ್ರಭಾವಶಾಲಿ, ನಿನ್ನನ್ನು ಯಾರಿಗೆ ಹೋಲಿಸಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನಿಗೂ ಅವನ ಅಸಂಖ್ಯಾತ ಪ್ರಜೆಗೂ ಹೀಗೆ ನುಡಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ - ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ? ಅಧ್ಯಾಯವನ್ನು ನೋಡಿ |
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.