Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:3 - ಪರಿಶುದ್ದ ಬೈಬಲ್‌

3 ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ತಿಲಕವೋ ದೇವದಾರುವೋ ಒಂದು ವೃಕ್ಷವು ಲೆಬನೋನಿನಲ್ಲಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ, ಅದರ ಎತ್ತರವು ಬಹಳ, ಅದರ ತುದಿಯು ಮೇಘಚುಂಬಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:3
24 ತಿಳಿವುಗಳ ಹೋಲಿಕೆ  

ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ.


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಬೆಯನ್ನು ಕೀಳುವೆನು. ಆ ಮರದ ಮೇಲಿರುವ ಒಂದು ಸಣ್ಣ ಕೊಂಬೆಯನ್ನು ಕೀಳುವೆನು. ಅದನ್ನು ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು.


“ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.


ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.


ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.


ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.


ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನ್ನು ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನ್ನು ಈದವು. ಆ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.


ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.


ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.


ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.


ಅದು ಬಲವಾದ ಕಾಂಡಗಳನ್ನು ಬೆಳೆಸಿತು. ಅದರ ಕಾಂಡಗಳು ಅಧಿಪತಿಗಳ ರಾಜದಂಡದಂತಿದ್ದವು. ಅವುಗಳಲ್ಲಿ ಒಂದು ಮೋಡಗಳ ಮಧ್ಯದಲ್ಲಿ ಎತ್ತರವಾಗಿ ಬೆಳೆಯಿತು. ಅದು ತನ್ನ ಎತ್ತರದಿಂದ ಮತ್ತು ತನ್ನ ಅನೇಕ ಕೊಂಬೆಗಳಿಂದ ಎದ್ದುಕಾಣುತ್ತಿತ್ತು.


ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು.


ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.


ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.


“ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಧಿಗಳು ಅಶ್ಶೂರದ ಸಮಾಧಿಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು.


ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.


ಮಂತ್ರವಾದಿಗಳು, ಜೋಯಿಸರು ಮತ್ತು ವಿದ್ವಾಂಸರು ಬಂದ ಮೇಲೆ ನಾನು ಅವರಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಆದರೆ ಅವರಿಗೆ ಅರ್ಥವನ್ನು ತಿಳಿಸಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು