Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:5 - ಪರಿಶುದ್ದ ಬೈಬಲ್‌

5 ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:5
9 ತಿಳಿವುಗಳ ಹೋಲಿಕೆ  

ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.


ನಂತರ ಆ ಹದ್ದು ದೇಶದ ಬೀಜಗಳಲ್ಲಿ ಒಂದನ್ನು (ಹಿಜ್ಕೀಯ) ತೆಗೆದುಕೊಂಡು ಅದನ್ನು ಒಳ್ಳೆಯ ಮಣ್ಣಿನಲ್ಲಿ ಬಿತ್ತಿತು; ಸಮೃದ್ಧಿಕರವಾದ ನೀರಿನ ಸಮೀಪದಲ್ಲಿ ಬೆಳೆಯುವ ನೀರವಂಜಿಯಂತೆ ಅದನ್ನು ಬೆಳೆಯಿಸಿತು.


ಸೇನಾದಂಡನಾಯಕನು ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವುದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವುದೇನೆಂದರೆ: “‘ನೀನು ಯಾವುದರ ಮೇಲೆ ಭರವಸವಿಟ್ಟಿರುವೆ?


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು