Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:6 - ಪರಿಶುದ್ದ ಬೈಬಲ್‌

6 ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನ್ನು ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನ್ನು ಈದವು. ಆ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಲ್ಲಾ ಆಕಾಶಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಮಾಡಿಕೊಂಡಿದ್ದವು; ಸಮಸ್ತಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳನ್ನು ಈಯುತ್ತಿದ್ದವು; ಮಹಾಜನಾಂಗಗಳೆಲ್ಲಾ ಅದರ ನೆರಳನ್ನು ಆಶ್ರಯಿಸಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:6
10 ತಿಳಿವುಗಳ ಹೋಲಿಕೆ  

ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”


ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.


ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.


ಆದರೆ ನೀವು ಈ ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.


ಆ ಮರವು ಮನೋಹರವಾಗಿತ್ತು. ಅದು ದೊಡ್ಡದಾಗಿತ್ತು. ಅದರ ಕೊಂಬೆಗಳು ವಿಶಾಲವಾಗಿದ್ದವು. ಅದರ ಬೇರುಗಳಿಗೆ ಧಾರಾಳವಾದ ನೀರಿತ್ತು.


ಕೆಳಗೆ ಬಿದ್ದ ಮರದ ಮೇಲೆ ಪಕ್ಷಿಗಳು ವಾಸಿಸಿದವು. ಕೆಳಗೆ ಬಿದ್ದ ಅದರ ಕೊಂಬೆಗಳ ಮೇಲೆ ಕಾಡುಪ್ರಾಣಿಗಳು ನಡೆದವು.


ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.


ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ.


ಪಕ್ಷಿಗಳು ಗೂಡುಗಳನ್ನು ಆ ಮರಗಳಲ್ಲಿ ಕಟ್ಟಿಕೊಳ್ಳುತ್ತವೆ. ದೊಡ್ಡ ಕೊಕ್ಕರೆಗಳು ತುರಾಯಿ ಮರಗಳಲ್ಲಿ ಜೀವಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು