ಯೆಹೆಜ್ಕೇಲನು 31:8 - ಪರಿಶುದ್ದ ಬೈಬಲ್8 ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮುಚ್ಚಲಾರದೆ ಹೋದವು; ತುರಾಯಿಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ; ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.