Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:9 - ಪರಿಶುದ್ದ ಬೈಬಲ್‌

9 ನಾನು ಅದಕ್ಕೆ ಅನೇಕ ಕೊಂಬೆಗಳನ್ನು ಕೊಟ್ಟು ಅಂದವಾಗಿ ಕಾಣುವಂತೆ ಮಾಡಿದೆನು. ದೇವರ ತೋಟವಾಗಿರುವ ಏದೆನಿನಲ್ಲಿರುವ ಮರಗಳೆಲ್ಲಾ ಅಸೂಯೆಪಡುತ್ತಿದ್ದವು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನದನು ಅಷ್ಟೊಂದು ಸುಂದರಗೊಳಿಸಿದ್ದೆ ಶಾಖೋಪಶಾಖೆಗಳಿಂದ ಅಸೂಯೆಪಡುತ್ತಿದ್ದವು ಏದೇನಿನ ದೇವೋದ್ಯಾನದ ವೃಕ್ಷಗಳೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಅದನ್ನು ಬಹು ಶಾಖೋಪಶಾಖೆಗಳಿಂದ ಅಂದಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲವೃಕ್ಷಗಳೂ ಅದಕ್ಕೆ ಅಸೂಯೆಪಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:9
26 ತಿಳಿವುಗಳ ಹೋಲಿಕೆ  

ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.


ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.


ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಬೆಯನ್ನು ಕೀಳುವೆನು. ಆ ಮರದ ಮೇಲಿರುವ ಒಂದು ಸಣ್ಣ ಕೊಂಬೆಯನ್ನು ಕೀಳುವೆನು. ಅದನ್ನು ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು.


ಹೌದು, ನೀನು ನಿನ್ನ ಸಂಪೂರ್ಣವಾದ ಸೌಂದರ್ಯಕ್ಕಾಗಿ ಜನಾಂಗಗಳ ಮಧ್ಯದಲ್ಲಿ ಹೆಸರು ವಾಸಿಯಾಯಿತು. ಯಾಕೆಂದರೆ ನಾನು ನಿನ್ನನ್ನು ಅತ್ಯಂತ ಸೌಂದರ್ಯವತಿಯನ್ನಾಗಿ ಮಾಡಿದೆನು.’” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ದಾವೀದನು ಬಹಳವಾಗಿ ಯಶ್ವಸಿಯಾಗುತ್ತಿರುವುದನ್ನು ಕಂಡ ಸೌಲನು ದಾವೀದನಿಗೆ ಮತ್ತಷ್ಟು ಭಯಪಟ್ಟನು.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ಅವನಿಗೆ ಅನೇಕ ದನಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡೂಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆಪಡುತ್ತಿದ್ದರು.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು