ಯೆಹೆಜ್ಕೇಲನು 32:13 - ಪರಿಶುದ್ದ ಬೈಬಲ್13 ಈಜಿಪ್ಟಿನ ಹೊಳೆಯ ತೀರದಲ್ಲಿ ಅನೇಕ ಪ್ರಾಣಿಗಳಿವೆ. ನಾನು ಅವುಗಳನ್ನು ನಾಶಮಾಡುವೆನು. ಜನರು ಹೊಳೆಯ ನೀರನ್ನು ತಮ್ಮ ಕಾಲುಗಳಿಂದ ಕೆಸರಾಗಿ ಇನ್ನು ಮಾಡಲಾರರು. ದನಗಳ ಗೊರಸುಗಳು ನೀರನ್ನು ಕೆಸರನ್ನಾಗಿ ಮಾಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೊಡ್ಡ ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲು ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಅಲ್ಲಿ ಗೊರಸಿಕ್ಕದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬಹುಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲಿಕ್ಕೆ ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಗೊರಸಿಕ್ಕದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಆ ಬಹು ಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು. ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಪಾದವಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವುದಿಲ್ಲ. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”