ಯೆಹೆಜ್ಕೇಲನು 32:15 - ಪರಿಶುದ್ದ ಬೈಬಲ್15 “ಈಜಿಪ್ಟ್ ದೇಶವನ್ನು ನಾನು ಬರಿದುಮಾಡುವೆನು. ಆ ದೇಶವು ಎಲ್ಲವನ್ನು ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನ್ನು ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ನೀಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’ ಅಧ್ಯಾಯವನ್ನು ನೋಡಿ |