16 “ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನ್ನು ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.
16 ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ” ಇದು ಕರ್ತನಾದ ಯೆಹೋವನ ನುಡಿ.
16 ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”
16 ಪ್ರಲಾಪಿಸುವವರು ಈ ಶೋಕಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಐಗುಪ್ತಕ್ಕಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತವನ್ನು ಹಾಡಲಿ; ಇದು ಕರ್ತನಾದ ಯೆಹೋವನ ನುಡಿ.
16 “ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”
ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.
ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.