18 “ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.
18 “ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.
“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”
“ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನ್ನು ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.
ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.
ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.
“ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.
“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.