Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:24 - ಪರಿಶುದ್ದ ಬೈಬಲ್‌

24 “ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:24
29 ತಿಳಿವುಗಳ ಹೋಲಿಕೆ  

“ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.


ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನ್ನು ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಧಿಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನ್ನು ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ.


“ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.


ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.


ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದುಕೊಳ್ಳುವೆ. ಆಗ ನೀನು ನಾಚಿಕೆಪಡುವೆ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತೈಸುವೆ.


ಆದ್ದರಿಂದ ನಿನ್ನ ಅವಮಾನವನ್ನು ನೀನು ಸಹಿಸಿಕೊಳ್ಳಬೇಕು. ನಿನಗಿಂತ ನಿನ್ನ ಸಹೋದರಿಯರು ನೀತಿವಂತರಂತೆ ತೋರುತ್ತಾರೆ. ಯಾಕೆಂದರೆ ನಿನ್ನ ಪಾಪಗಳು ಬಹಳ ಅಸಹ್ಯವಾಗಿದ್ದವು. ಆದ್ದರಿಂದ ನಿನಗೆ ಅವಮಾನವಾಗಲೇಬೇಕು; ನೀನು ನಾಚಿಕೆಯನ್ನು ಅನುಭವಿಸಲೇಬೇಕು ಯಾಕೆಂದರೆ ನೀನು ನಿನ್ನ ಸಹೋದರಿಯರನ್ನು ನಿರಪರಾಧಿಗಳಾಗಿ ಕಾಣುವಂತೆ ಮಾಡಿರುವೆ.”


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


“ಆದ್ದರಿಂದ ಯಾಜಕರಂತೆ ಲೇವಿಯರು ನನಗೆ ಕಾಣಿಕೆಗಳನ್ನು ತರಕೂಡದು. ಅವರು ನನ್ನ ಪವಿತ್ರ ವಸ್ತುಗಳ ಬಳಿಗೂ, ಅತೀ ಪವಿತ್ರ ವಸ್ತುಗಳ ಬಳಿಗೂ ಬರಬಾರದು. ಅವರು ಮಾಡಿದ ಭಯಂಕರ ಕೃತ್ಯಗಳಿಗಾಗಿ ಅವರು ಅವಮಾನಿತರಾಗಬೇಕು.


ಆ ಜನರು ತಮಗೊದಗಿದ ಅವಮಾನವನ್ನೂ ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸ್ವದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಬೇಕಾಗಿಲ್ಲ.


ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ.


ನಾನು ಜಿಮ್ರಿಯ ಎಲ್ಲಾ ರಾಜರು, ಏಲಾಮಿನ ಎಲ್ಲಾ ರಾಜರು, ಮೇದ್ಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


ಆ ದಿನಗಳಲ್ಲಿ ಅಮ್ರಾಫೆಲನು ಶಿನಾರಿನ ರಾಜನಾಗಿದ್ದನು; ಅರಿಯೋಕನು ಎಲ್ಲಸಾರಿನ ರಾಜನಾಗಿದ್ದನು; ಕೆದೊರ್ಲಗೋಮರನು ಏಲಾಮಿನ ರಾಜನಾಗಿದ್ದನು; ತಿದ್ಗಾಲನು ಗೋಯಿಮದ ರಾಜನಾಗಿದ್ದನು.


“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.


ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.


“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಶೂರರು, ಬಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.


“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ. ಜನರು ನೆಲವನ್ನು ಅಗೆದು ಜ್ಞಾನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.


ಶೇಮನ ಗಂಡುಮಕ್ಕಳು ಯಾರೆಂದರೆ: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್. ಅರಾಮನ ಮಕ್ಕಳು ಯಾರೆಂದರೆ: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.


ಅದಕ್ಕೆ ನಾನೆಂದೆ: “ಇನ್ನು ಮೇಲೆ ಜೀವಿತರ ಲೋಕದಲ್ಲಿ ಇನ್ನು ದೇವರಾದ ಯೆಹೋವನನ್ನು ನೋಡುವದಿಲ್ಲ. ಇನ್ನು ಮೇಲೆ ಜನರು ಲೋಕದಲ್ಲಿ ಜೀವಿಸುವದನ್ನು ನಾನು ನೋಡುವದಿಲ್ಲ.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.


“ಈಜಿಪ್ಟೇ, ನೀನು ಬೇರೆಯವರಿಗಿಂತ ಉತ್ತಮಳೇನೂ ಅಲ್ಲ. ಮರಣದ ಸ್ಥಳಕ್ಕೆ ಹೋಗು. ಅಲ್ಲಿ ಪರದೇಶದವರೊಂದಿಗೆ ಹೋಗಿ ಬಿದ್ದುಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು