ಯೆಹೆಜ್ಕೇಲನು 32:25 - ಪರಿಶುದ್ದ ಬೈಬಲ್25 ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನ್ನು ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಧಿಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನ್ನು ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಏಲಾಮು ಮಲಗುವುದಕ್ಕೆ, ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತಮುತ್ತಲಿವೆ. ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳ ಏರ್ಪಾಡಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಏಲಾಮು ಮಲಗುವದಕ್ಕೆ ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ; ಸಂಹೃತರ ಮಧ್ಯದಲ್ಲೇ ಏಲಾವಿುಗೆ ಸ್ಥಳವು ಏರ್ಪಾಟಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ. ಅಧ್ಯಾಯವನ್ನು ನೋಡಿ |
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.