ಯೆಹೆಜ್ಕೇಲನು 32:26 - ಪರಿಶುದ್ದ ಬೈಬಲ್26 “ಮೆಷಕ್, ತೂಬಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಧಿಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನು ಉಂಟುಮಾಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಮೆಷೆಕ್, ತೂಬಲ್ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತಾರೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು, ಜೀವಲೋಕದಲ್ಲಿ ಅವರು ಭೀಕರರಾಗಿದ್ದರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮೆಷೆಕೂ ತೂಬಲೂ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದರಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.