ಯೆಹೆಜ್ಕೇಲನು 32:30 - ಪರಿಶುದ್ದ ಬೈಬಲ್30 “ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. ಅಧ್ಯಾಯವನ್ನು ನೋಡಿ |