31 “ಪಾತಾಳಕ್ಕೆ ಸೇರಿದ ಜನರನ್ನು ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.
31 ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು” ಇದು ಕರ್ತನಾದ ಯೆಹೋವನ ನುಡಿ.
31 “ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲ ಸೈನಿಕರೂ ಸಮಾಧಾನಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.
31 ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲಸೈನಿಕರೂ ಸಮಾಧಾನ ಹೊಂದುವರು. ಇದು ಕರ್ತನಾದ ಯೆಹೋವನ ನುಡಿ.
31 “ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.
ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ.
ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.
“ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯಗೊಳಿಸಿದ್ದನು. ಈಗಲಾದರೋ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.