ಯೆಹೆಜ್ಕೇಲನು 32:32 - ಪರಿಶುದ್ದ ಬೈಬಲ್32 “ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯಗೊಳಿಸಿದ್ದನು. ಈಗಲಾದರೋ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗಹತರ ನಡುವೆ, ಒರಗಿಹೋಗುವರು ಎಂಬದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |