ಯೆಹೆಜ್ಕೇಲನು 32:4 - ಪರಿಶುದ್ದ ಬೈಬಲ್4 ಆಮೇಲೆ ನಿನ್ನನ್ನು ಒಣನೆಲದ ಮೇಲೆ ಹಾಕುವೆನು. ಹೊಲದ ಮೇಲೆ ನಿನ್ನನ್ನು ಬಿಸಾಡುವೆನು. ಎಲ್ಲಾ ಪಕ್ಷಿಗಳು ನಿನ್ನನ್ನು ತಿಂದುಬಿಡುವಂತೆ ಮಾಡುವೆನು. ಎಲ್ಲಾ ಕಡೆಗಳಿಂದ ಕಾಡುಮೃಗಗಳು ಬಂದು ನಿನ್ನನ್ನು ಹೊಟ್ಟೆತುಂಬಾ ತಿನ್ನುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಕಾಶದ ಪಕ್ಷಿಗಳು ನಿನ್ನ ಮೇಲೆರಗುವಂತೆ, ಸಮಸ್ತ ಭೂಜಂತುಗಳು ನಿನ್ನಿಂದ ತೃಪ್ತಿಗೊಳ್ಳುವಂತೆ, ನಿನ್ನನೆಸೆದುಬಿಡುವೆ ನೆಲದ ಮೇಲೆ ಬಯಲಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬೈಲಿನಲ್ಲಿ ಎಸೆದು ಆಕಾಶಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ ಸಮಸ್ತಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು. ಬಯಲಿನ ಮೇಲೆ ಬಿಸಾಡುವೆನು. ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. ಅಧ್ಯಾಯವನ್ನು ನೋಡಿ |