ಯೆಹೆಜ್ಕೇಲನು 32:7 - ಪರಿಶುದ್ದ ಬೈಬಲ್7 ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 [ಫರೋಹನೇ,] ನಾನು ನಿನ್ನ ಬೆಳಕನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಮಂಕುಮಾಡಿ ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.