ಯೆಹೆಜ್ಕೇಲನು 33:12 - ಪರಿಶುದ್ದ ಬೈಬಲ್12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ‘ಒಬ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನ್ನು ನಡಿಸಿದರೆ ಅವನ ಸತ್ಕಾರ್ಯಗಳು ಅವನನ್ನು ರಕ್ಷಿಸಲಾರವು. ಒಬ್ಬನು ದುಷ್ಕೃತ್ಯಗಳನ್ನು ಮಾಡಿ ತನ್ನ ದುಷ್ಟತ್ವದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದ್ದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಬ್ಬ ಪಾಪಿಯನ್ನು ರಕ್ಷಿಸಲಾರದೆಂಬುದನ್ನು ಜ್ಞಾಪಕದಲ್ಲಿಟ್ಟುಕೊ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನರಪುತ್ರನೇ, ಜನರಿಗೆ ಹೀಗೆ ಹೇಳು - ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯವು ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪವು ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯವು ಅವನನ್ನು ಉಳಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’ ಅಧ್ಯಾಯವನ್ನು ನೋಡಿ |
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.