Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:17 - ಪರಿಶುದ್ದ ಬೈಬಲ್‌

17 “ಆದರೆ ನಿನ್ನ ಜನರು, ‘ಅದು ನ್ಯಾಯವಲ್ಲ. ನನ್ನ ಒಡೆಯನಾದ ಯೆಹೋವನು ಹಾಗೆ ಮಾಡಲಾರನು’ ಎಂದು ಹೇಳುವರು. “ಅಂಥ ಜನರೇ ನ್ಯಾಯವಂತರಲ್ಲ. ಅವರೇ ಬದಲಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನಿನ್ನ ಜನರು ಕರ್ತನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದಾರೆ, ಅವರ ಕ್ರಮವೇ ಸಮವಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:17
10 ತಿಳಿವುಗಳ ಹೋಲಿಕೆ  

ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನ್ನ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು, “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ.


ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.


ಆದರೆ ನಾನು ನ್ಯಾಯವಂತನಲ್ಲ, ಎಂದು ನೀವು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”


“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?


“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ.


“ನರಪುತ್ರನೇ, ನಿನ್ನ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು, ‘ನಾನು ಈ ದೇಶದೊಂದಿಗೆ ಯುದ್ಧ ಮಾಡಲು ಶತ್ರು ಸೈನಿಕರನ್ನು ಬರಮಾಡುತ್ತೇನೆ. ಈ ಸಮಯದಲ್ಲಿ ಜನರು ಒಬ್ಬ ಕಾವಲುಗಾರನನ್ನು ಆರಿಸುವರು.


ಅವನು ಹಿಂದೆ ಮಾಡಿದ ದುಷ್ಕೃತ್ಯಗಳನ್ನು ನಾನು ನನ್ನ ನೆನಪಿಗೆ ತರುವದಿಲ್ಲ. ಯಾಕೆಂದರೆ ಈಗ ಅವನು ಶಿಷ್ಟನಾಗಿ ಬಾಳುತ್ತಿದ್ದಾನೆ. ಆದುದರಿಂದ ಅವನು ಜೀವಿಸುವನು.


ಒಬ್ಬ ಒಳ್ಳೆಯ ಮನುಷ್ಯನು ತನ್ನ ಶಿಷ್ಟತ್ವವನ್ನು ಬಿಟ್ಟು ಪಾಪದ ಮಾರ್ಗದಲ್ಲಿ ನಡೆದರೆ ಅವನು ಅವನ ಪಾಪಗಳ ನಿಮಿತ್ತ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು