ಯೆಹೆಜ್ಕೇಲನು 33:21 - ಪರಿಶುದ್ದ ಬೈಬಲ್21 ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.