Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:25 - ಪರಿಶುದ್ದ ಬೈಬಲ್‌

25 “ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದದರಿಂದ ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ, ಬೊಂಬೆಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:25
29 ತಿಳಿವುಗಳ ಹೋಲಿಕೆ  

ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


“‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ.


ಆ ನೀತಿವಂತ ಮನುಷ್ಯನು ಬೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನ್ನ ಹೆಂಡತಿಯು ಮುಟ್ಟಾದಾಗ ಆಕೆಯನ್ನು ಕೂಡುವುದಿಲ್ಲ.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


“ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ನಾವು ಒಂದು ಪತ್ರವನ್ನು ಈಗಾಗಲೇ ಕಳುಹಿಸಿದ್ದೇವೆ. ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ’ ಎಂದು ಆ ಪತ್ರದಲ್ಲಿ ಬರೆಯಲಾಗಿದೆ” ಎಂದರು.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ.


ಈ ಒಳ್ಳೆಯ ಮಗನು ಬೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ತಿನ್ನುವುದಿಲ್ಲ. ಅವನು ಇಸ್ರೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


“ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು.


ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.


ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.


ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.


“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.


ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲಸು ಮಾಡಿದರು. ಆದ್ದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು