Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:27 - ಪರಿಶುದ್ದ ಬೈಬಲ್‌

27 “‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವದು; ಬೈಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:27
16 ತಿಳಿವುಗಳ ಹೋಲಿಕೆ  

ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”


ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.


ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.


“ನರಪುತ್ರನೇ, ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವುದೇನೆಂದರೆ, ‘ಅಬ್ರಹಾಮನು ಒಬ್ಬನೇ. ಈ ದೇಶವನ್ನೆಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಬಹಳ ಮಂದಿ ಇದ್ದೇವೆ. ಆದ್ದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’


ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.


ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.


ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು.


ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.


ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.


ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದ್ದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಯೆಹೋವನು ಹೇಳುವುದೇನೆಂದರೆ, “ಭೂಲೋಕದಲ್ಲಿರುವದೆಲ್ಲವನ್ನು ನಾನು ನಾಶಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು