Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:28 - ಪರಿಶುದ್ದ ಬೈಬಲ್‌

28 ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:28
27 ತಿಳಿವುಗಳ ಹೋಲಿಕೆ  

ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.


ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.


ಆದ್ದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಹೀಗೆನ್ನುತ್ತಾನೆ:


ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.


ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.’”


ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.


ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ದೇವರು ಹೇಳಿದ್ದೇನೆಂದರೆ, “ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆನು. ನೀನು ಕಲ್ಲುಗಳ ರಾಶಿಯಾಗಿ ಹೋಗುವಿ. ನಿನ್ನ ಸುತ್ತಲೂ ಇರುವ ಜನಾಂಗಗಳು ನಿನ್ನನ್ನು ಗೇಲಿ ಮಾಡುತ್ತವೆ. ನಿನ್ನನ್ನು ದಾಟಿಹೋಗುವ ಪ್ರತಿಯೊಬ್ಬನೂ ನಿನ್ನನ್ನು ಕಂಡು ಹಾಸ್ಯಮಾಡುವನು.


ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”


ಯೆಹೋವನು ಹೇಳುವುದೇನೆಂದರೆ, “ಭೂಲೋಕದಲ್ಲಿರುವದೆಲ್ಲವನ್ನು ನಾನು ನಾಶಮಾಡುತ್ತೇನೆ.


ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಠವಾದ ಪಟ್ಟಣಗಳನ್ನು ನಾಶಮಾಡುವೆ. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು