ಯೆಹೆಜ್ಕೇಲನು 33:31 - ಪರಿಶುದ್ದ ಬೈಬಲ್31 ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 [ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು. ಅಧ್ಯಾಯವನ್ನು ನೋಡಿ |