ಯೆಹೆಜ್ಕೇಲನು 33:4 - ಪರಿಶುದ್ದ ಬೈಬಲ್4 ಜನರು ಅದನ್ನು ಕೇಳಿದರೂ ಅಲಕ್ಷ್ಯ ಮಾಡಿದಾಗ ಶತ್ರುವು ಬಂದು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆಗ ಅವರ ಮರಣಕ್ಕೆ ಅವರೇ ಕಾರಣರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು. ಅಧ್ಯಾಯವನ್ನು ನೋಡಿ |