Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:6 - ಪರಿಶುದ್ದ ಬೈಬಲ್‌

6 “‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ ಸ್ವಜನರನ್ನು ಎಚ್ಚರಿಸದೆ ಇರುವಲ್ಲಿ ಖಡ್ಗವು ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಹೊಣೆಯಾದ ಕಾವಲುಗಾರನಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಕಾವಲುಗಾರನು ಬರುವ ಖಡ್ಗವನ್ನು ನೋಡಿ, ಒಂದು ವೇಳೆ ಕೊಂಬನ್ನು ಊದದೆ ಜನರನ್ನೂ ಎಚ್ಚರಿಸದೆ ಹೋದರೆ, ಆಗ ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನಾದರೂ ನಾಶಮಾಡಿದರೆ, ಅವನು ತನ್ನ ಪಾಪದಲ್ಲಿಯೇ ನಾಶವಾಗುವನು. ಆದರೆ ನಾನು ಅವನ ಸಾವಿಗೆ ಕಾವಲುಗಾರನನ್ನೇ ಹೊಣೆಮಾಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:6
13 ತಿಳಿವುಗಳ ಹೋಲಿಕೆ  

ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.


ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.


ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.


ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.


ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”


“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು