ಯೆಹೆಜ್ಕೇಲನು 34:14 - ಪರಿಶುದ್ದ ಬೈಬಲ್14 ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವವು; ಇಸ್ರಾಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು. ಅಧ್ಯಾಯವನ್ನು ನೋಡಿ |
“ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.