ಯೆಹೆಜ್ಕೇಲನು 34:16 - ಪರಿಶುದ್ದ ಬೈಬಲ್16 “ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.
ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”