ಯೆಹೆಜ್ಕೇಲನು 34:18 - ಪರಿಶುದ್ದ ಬೈಬಲ್18 ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದ್ದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 (ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 (ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 [ಟಗರುಹೋತಗಳೇ,] ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ವಿುಕ್ಕ ಮೇವನ್ನು ತುಳಿದು ಕಾಲಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ವಿುಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ? ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”