Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:23 - ಪರಿಶುದ್ದ ಬೈಬಲ್‌

23 ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:23
25 ತಿಳಿವುಗಳ ಹೋಲಿಕೆ  

ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ.


“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!


ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.


ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದೆ. ನನ್ನ ವಾಗ್ದಾನವು ನೆರವೇರುವ ಸಮಯ ಬರುತ್ತಿದೆ.


ನನ್ನ ಕುರಿಗಳನ್ನು ಆ ದೇಶಗಳಿಂದ ಬರಮಾಡುವೆನು. ಆ ದೇಶಗಳಿಂದ ಅವುಗಳನ್ನು ಒಟ್ಟುಗೂಡಿಸುವೆನು. ಅವುಗಳ ಸ್ವಂತ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಬೆಟ್ಟಗಳಲ್ಲಿ ಅವುಗಳನ್ನು ಮೇಯಿಸುವೆನು. ನೀರಿನ ತೊರೆಗಳ ಬದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನು ಅವುಗಳನ್ನು ಮೇಯಿಸುವೆನು.


ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.


ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು