ಯೆಹೆಜ್ಕೇಲನು 34:24 - ಪರಿಶುದ್ದ ಬೈಬಲ್24 ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಅಧಿಪತಿಗೆ ಪವಿತ್ರ ಪ್ರದೇಶ ಭಾಗದ ಎರಡು ಕಡೆಗಳಲ್ಲೂ ಭೂಭಾಗಗಳಿರುವುದು. ಅಂದರೆ ಪವಿತ್ರ ಪ್ರದೇಶಕ್ಕೆ ಪಶ್ಚಿಮದಲ್ಲಿರುವ ಪಶ್ಚಿಮ ಭಾಗ ಮತ್ತು ಇಸ್ರೇಲರ ಪಟ್ಟಣದ ಪೂರ್ವ ಭೂಭಾಗ. ಇದು ಪವಿತ್ರ ಪ್ರದೇಶದ ಪೂರ್ವಭಾಗದಲ್ಲಿದೆ. ಅಧಿಪತಿಯ ಪಶ್ಚಿಮ ಭಾಗವು ಪವಿತ್ರ ಪ್ರದೇಶ ಭಾಗದ ಪಶ್ಚಿಮದ ಅಂಚಿನಿಂದ ಮೆಡಿಟರೇನಿಯನ್ ಸಮುದ್ರದವರೆಗೂ ವಿಸ್ತರಿಸಿದೆ. ಅಧಿಪತಿಯ ಪೂರ್ವ ಪ್ರದೇಶ ಭಾಗವು ಪೂರ್ವದಿಕ್ಕಿನ ಪಟ್ಟಣದ ಅಂಚಿನಿಂದ ಪೂರ್ವದ ಗಡಿಯವರೆಗೂ ವಿಸ್ತರಿಸಿದೆ.
“ಈ ವಿಶೇಷ ಭೂಪ್ರದೇಶದ ಒಂದು ಭಾಗವು ದೇಶಾಧಿಪತಿಗೆ ಸೇರಿದೆ. ಈ ಭೂಪ್ರದೇಶವು ಚೌಕವಾಗಿದೆ. ಇದರ ಉದ್ದ 25,000 ಮೊಳ. ಇದರ ಅಗಲ 25,000 ಮೊಳ. ಈ ವಿಶೇಷ ಪ್ರದೇಶದಲ್ಲಿ ಒಂದು ಭಾಗವು ಯಾಜಕರಿಗೂ ಒಂದು ಭಾಗವು ಲೇವಿಯರಿಗೂ ಒಂದು ಭಾಗವು ದೇವಾಲಯಕ್ಕೂ ಸೇರಿವೆ. ಈ ವಿಶೇಷ ಪ್ರದೇಶದ ಕೇಂದ್ರದಲ್ಲಿ ದೇವಾಲಯವಿರುತ್ತದೆ. ಉಳಿದ ಭಾಗವೆಲ್ಲಾ ದೇಶಾಧಿಪತಿಗೆ ಸೇರಿದೆ. ಬೆನ್ಯಾಮೀನನ ಭಾಗಕ್ಕೂ ಯೆಹೂದದ ಭಾಗಕ್ಕೂ ನಡುವೆ ಇರುವ ಭೂಮಿಯು ಅಧಿಪತಿಗೆ ಸೇರಿದೆ.