ಯೆಹೆಜ್ಕೇಲನು 34:25 - ಪರಿಶುದ್ದ ಬೈಬಲ್25 “ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.