ಯೆಹೆಜ್ಕೇಲನು 34:26 - ಪರಿಶುದ್ದ ಬೈಬಲ್26 ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.