ಯೆಹೆಜ್ಕೇಲನು 34:27 - ಪರಿಶುದ್ದ ಬೈಬಲ್27 ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.