ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”
ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.
“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”
“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”
“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.
ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”
ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.
ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.