Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:30 - ಪರಿಶುದ್ದ ಬೈಬಲ್‌

30 ಆಗ ನಾನು ಅವರ ದೇವರೆಂದೂ ನಾನು ಅವರೊಂದಿಗೆ ಇದ್ದೇನೆ ಎಂದೂ ಅವರು ತಿಳಿದುಕೊಳ್ಳುವರು. ಇಸ್ರೇಲ್ ಜನಾಂಗವು ಸಹ ತಾವು ನನ್ನ ಜನರು ಎಂದು ತಿಳಿದುಕೊಳ್ಳುವರು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “‘ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನಾನು ತಮ್ಮೊಂದಿಗಿದ್ದೇನೆಂದೂ ಇಸ್ರಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂದೂ ನಿಶ್ಚಯಿಸಿಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗಿದ್ದೇನೆಂತಲೂ ಇಸ್ರಾಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂತಲೂ ನಿಶ್ಚಯಿಸಿಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರು ತಮ್ಮ ಯೆಹೋವ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:30
11 ತಿಳಿವುಗಳ ಹೋಲಿಕೆ  

ನನ್ನ ಪವಿತ್ರಗುಡಾರ ಅವರೊಂದಿಗಿರುವದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.


ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.


ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತ್ವವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ನಾನು ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವೆನು. ಮತ್ತು ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀನು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು