ಯೆಹೆಜ್ಕೇಲನು 34:4 - ಪರಿಶುದ್ದ ಬೈಬಲ್4 ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅಧ್ಯಾಯವನ್ನು ನೋಡಿ |