ಯೆಹೆಜ್ಕೇಲನು 34:5 - ಪರಿಶುದ್ದ ಬೈಬಲ್5 “‘ಈಗ ಆ ಮಂದೆಯು ಚದರಿಹೋಗಿದೆ. ಯಾಕೆಂದರೆ ಅವುಗಳಿಗೆ ಕುರುಬರಿಲ್ಲ. ಅವುಗಳು ಕಾಡುಪ್ರಾಣಿಗಳಿಗೆ ಆಹಾರವಾದವು. ಆದ್ದರಿಂದ ಅವು ಚದರಿಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕುರುಬರು ಇರಲಿಲ್ಲವಾದದರಿಂದ ಅವು ಚದರಿಹೋದವು; ದಿಕ್ಕಾಪಾಲಾಗಿ ಕಾಡಿನ ಸಕಲಮೃಗಗಳಿಗೆ ತುತ್ತಾದವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು. ಅಧ್ಯಾಯವನ್ನು ನೋಡಿ |
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.