Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:8 - ಪರಿಶುದ್ದ ಬೈಬಲ್‌

8 “ನನ್ನ ಜೀವದಾಣೆ, ನನ್ನ ಕುರಿಗಳು ಎಲ್ಲಾ ಬಗೆಯ ಕಾಡುಪ್ರಾಣಿಗಳಿಂದ ಹಿಡಿಯಲ್ಪಟ್ಟು ಅವುಗಳಿಗೆ ಆಹಾರವಾದವು. ಯಾಕೆಂದರೆ ಅವುಗಳಿಗೆ ಒಳ್ಳೆಯ ಕುರುಬರಿರಲಿಲ್ಲ. ನನ್ನ ಕುರುಬರು ತಮ್ಮ ಕುರಿಗಳಿಗೆ ಗಮನಕೊಡಲಿಲ್ಲ. ಅವರು ಅವುಗಳನ್ನು ಕೊಂದು ತಿಂದರು. ಆದರೆ ಮಂದೆಗೆ ಆಹಾರ ಒದಗಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು, ಕುರುಬರು ಇರಲಿಲ್ಲವಲ್ಲಾ, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲವಲ್ಲಾ, ಅವರು ಸ್ವಂತ ಹೊಟ್ಟೆಯನ್ನು ನೋಡಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದುದರಿಂದಲೂ ನನ್ನ ಮಂದೆಯು ಕುರುಬನಿಲ್ಲದೆ ಕಾಡುಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರುಬರು ನನ್ನ ಮಂದೆಯನ್ನು ಹುಡುಕದೆ ಇದ್ದುದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದೆ ಇದ್ದುದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:8
14 ತಿಳಿವುಗಳ ಹೋಲಿಕೆ  

ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.


ನಾನು ನಿಮ್ಮೊಂದಿಗೆ ಇದ್ದಾಗ, ಯಾರ ಹಣವನ್ನಾಗಲಿ ಒಳ್ಳೆಯ ಬಟ್ಟೆಗಳನ್ನಾಗಲಿ ಎಂದೂ ಬಯಸಲಿಲ್ಲ.


“ನೀವು ನನ್ನ ಕುರಿಗಳು, ಹಸಿರುಗಾವಲಿನ ಕುರಿಗಳು. ನೀವು ಮಾನವರಷ್ಟೇ. ನಾನು ನಿಮ್ಮ ದೇವರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದ್ದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ.


ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”


ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.


ಆದ್ದರಿಂದ ಕುರಬರೇ, ಯೆಹೋವನ ಮಾತುಗಳನ್ನು ಕೇಳಿರಿ. ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ,


ಆದ್ದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ.


ಆದ್ದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಹೀಗೆನ್ನುತ್ತಾನೆ:


ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು