10 ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
10 ನೀನು - ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವವು, ನಾವು ಅವುಗಳನ್ನು ಅನುಭವಿಸುವೆವು ಅಂದುಕೊಂಡು ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯ ಮಾಡಿದ್ದರಿಂದ ನನ್ನ ಜೀವದಾಣೆ,
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನಾಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’
ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.
ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು.
ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.
ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”
“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”
ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.
ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.
ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.