ಯೆಹೆಜ್ಕೇಲನು 35:12 - ಪರಿಶುದ್ದ ಬೈಬಲ್12 ಆಗ ನಿನ್ನ ಎಲ್ಲಾ ತುಚ್ಛಮಾತುಗಳನ್ನು ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವೆ. “ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನ್ನೆಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನ್ನು ಲೂಟಿ ಮಾಡೋಣ’ ಎಂದು ನೀನು ಹೇಳಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತು ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ - ಆಹಾ, ಹಾಳಾದವು, ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬದು ನಿನಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ. ಅಧ್ಯಾಯವನ್ನು ನೋಡಿ |