ಯೆಹೆಜ್ಕೇಲನು 35:15 - ಪರಿಶುದ್ದ ಬೈಬಲ್15 ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ” ಅಧ್ಯಾಯವನ್ನು ನೋಡಿ |