ಯೆಹೆಜ್ಕೇಲನು 35:3 - ಪರಿಶುದ್ದ ಬೈಬಲ್3 ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅದಕ್ಕೆ ಹೇಳು: “‘ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ಶಿಕ್ಷಿಸುತ್ತೇನೆ. ನಾನು ನಿನ್ನನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”