Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:5 - ಪರಿಶುದ್ದ ಬೈಬಲ್‌

5 ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಇಸ್ರಾಯೇಲ್ಯರ ಮೇಲೆ ದೀರ್ಘದ್ವೇಷವಿಟ್ಟು ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:5
15 ತಿಳಿವುಗಳ ಹೋಲಿಕೆ  

ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”


“‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ.


ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದ್ವೇಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಆಗ ನಿನ್ನ ಎಲ್ಲಾ ತುಚ್ಛಮಾತುಗಳನ್ನು ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವೆ. “ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನ್ನೆಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನ್ನು ಲೂಟಿ ಮಾಡೋಣ’ ಎಂದು ನೀನು ಹೇಳಿದಿ.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.


ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. “ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು.


“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.


ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು