ಯೆಹೆಜ್ಕೇಲನು 35:9 - ಪರಿಶುದ್ದ ಬೈಬಲ್9 ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿದುಕೊಳ್ಳುತ್ತಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನಿನ್ನವರಿಗೆ ನಿಶ್ಚಿತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”