ಯೆಹೆಜ್ಕೇಲನು 36:1 - ಪರಿಶುದ್ದ ಬೈಬಲ್1 “ನರಪುತ್ರನೇ, ನನ್ನ ಪರವಾಗಿ ಇಸ್ರೇಲಿನ ಪರ್ವತದೊಂದಿಗೆ ಮಾತನಾಡು. ಅವುಗಳಿಗೆ ಯೆಹೋವನ ಮಾತುಗಳನ್ನು ಕೇಳಲು ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ - ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿ |
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.