ಯೆಹೆಜ್ಕೇಲನು 36:11 - ಪರಿಶುದ್ದ ಬೈಬಲ್11 ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಫಲಭರಿತವಾಗುವುವು. ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮಸ್ಥಿತಿಗೆ ತರುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.