Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:15 - ಪರಿಶುದ್ದ ಬೈಬಲ್‌

15 “ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:15
21 ತಿಳಿವುಗಳ ಹೋಲಿಕೆ  

ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ.


ಯೆಹೋವನೇ ನಿನ್ನ ಸೇವಕನಿಗೆ ಜನರು ಮಾಡಿದ ಅವಮಾನವನ್ನು ದಯವಿಟ್ಟು ಜ್ಞಾಪಿಸಿಕೊ. ಯೆಹೋವನೇ, ನಿನ್ನ ಶತ್ರುಗಳಿಂದ ಅವಮಾನಕರವಾದ ಮಾತುಗಳನ್ನು ನಾನು ಕೇಳಬೇಕಾಯಿತು. ನೀನು ಅಭಿಷೇಕಿಸಿದ ರಾಜನನ್ನು ಅವರು ಅವಮಾನ ಮಾಡಿದರು!


“ಇಸ್ರೇಲ್ ದೇಶದ ವಿಷಯವಾಗಿ ಅವರಿಗೆ ಹೇಳು. ಪರ್ವತ, ಬೆಟ್ಟ, ತಗ್ಗು, ಹೊಳೆಗಳಿಗೆ ಹೇಳು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ತಿಳಿಸು. ‘ನೀನು ಆ ದೇಶಗಳವರ ನಿಂದನೆಯ ಮಾತುಗಳನ್ನು ಕೇಳಬೇಕಾಯಿತಲ್ಲಾ ಎಂದು ನನ್ನ ಹೃದಯವು ಸಿಟ್ಟಿನಲ್ಲಿ ಕುದಿಯುತ್ತದೆ.’”


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ಯೆಹೋವನು ಹೀಗೆನ್ನುತ್ತಾನೆ, “ಮೋವಾಬ್ಯರೂ ಅಮ್ಮೋನ್ಯರೂ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ. ಅವರು ನನ್ನ ಜನರನ್ನೂ ಕೆಣಕಿದರು. ಅವರ ಪ್ರದೇಶಗಳನ್ನು ಎಳೆದುಕೊಂಡು ತಮ್ಮ ರಾಜ್ಯಗಳನ್ನು ವಿಸ್ತರಿಸಿದರು.


ಆಳವಾದ ಸಮುದ್ರದೊಳಗಿಂದ ಯೆಹೋವನು ತನ್ನ ಜನರನ್ನು ನಡೆಸಿದನು. ಕುದುರೆಯು ಮರುಭೂಮಿಯಲ್ಲಿ ನಡೆಯುವಂತೆ ಜನರು ಎಡವಿಬೀಳದೆ ನಡೆದರು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.


“‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿಮ್ಮನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.


ಆದರೆ ಇನ್ನು ಮುಂದೆ ನೀನು ಜನರನ್ನು ನಾಶಮಾಡುವುದಿಲ್ಲ. ಅವರ ಮಕ್ಕಳನ್ನು ನೀನು ತೆಗೆದುಬಿಡುವುದಿಲ್ಲ.” ಇದು ಒಡೆಯನಾದ ಯೆಹೋವನ ನುಡಿ.


ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.


ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ.


“ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.


ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನು ಇಸ್ರೇಲಿನ ವಿರುದ್ಧವಾಗಿ ಯುದ್ಧಕ್ಕೆ ಬರುವಾಗ ನಾನು ಅವನ ಮೇಲೆ ಕೋಪೋದ್ರಿಕ್ತನಾಗುವೆನು.


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು